ಸಿನಿಮಾ

ಬಿಗ್ ಬ್ರೇಕಿಂಗ್ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ಎಲ್ಲರು ಕಾತುರದಿಂದ ಎದುರು ನೋಡುತ್ತಿದ್ದ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆ ಈಗ ಹೊರಬಿದ್ದಿದೆ. ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಣೆ ಮಾಡಲಾಗಿದೆ. ಮೇ 12 ರಂದು ಮತದಾನ ನಡೆಯಲಿದೆ ಎಂದು ತಿಳಿದು ಬಂದಿದೆ. ಮೇ 28 ರಂದು 224 ಸದಸ್ಯರ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿಯಲಿದೆ, ಅದರೊಳಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿದು ಬಂದಿದೆ.

 

 

ರಾಜ್ಯಧಾನಿ ದೆಹಲಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. ರಾವತ್ ಅವರು ರಾಜ್ಯ ವಿಧಾನ ಸಭೆ ಚುನಾವಣೆ ದಿನಾಂಕವನ್ನು ಪ್ರಕಟಣೆ ಮಾಡಿದ್ದಾರೆ, ಈಗ ತತಕ್ಷಣದಿಂದ ನೀತಿಸಂಹಿತೆ ಜಾರಿಗೆ ಬಂದಿದೆ ಎಂದು ತಿಳಿದು ಬಂದಿದೆ.

 

 

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಸಕಲ ಸಿದ್ದದೆಯನ್ನು ಮಾಡಿಕೊಂಡಿದೆ. ಈಗಾಗಲೇ ಅನೇಕ ಬಾರಿ ಕಾರ್ಯಗಾರಗಳನ್ನು ನಡೆಸಲಾಗಿದೆ. ಚುನಾವಣೆ ಶಾಂತಿಯುವಾತವಾಗಿ ನಡೆಯಲು ಚುನಾವಣಾ ಆಯೋಗವು ಎಲ್ಲ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

 

 

ರಾಜ್ಯದ ಪ್ರತಿಯೊಂದು ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲಾ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟ ಮಾಡಿದೆ ಎಂದು ತಿಳಿದು ಬಂದಿದೆ. ಎಲ್ಲ ರಾಜಕೀಯ ಪಕ್ಷಗಳು ಗೆಲ್ಲಲೇಬೇಂದು ರಣತಂತ್ರ ಹೆಣೆಯುತ್ತಿವೆ. ಮತದಾರ ಪ್ರಭು ಯಾರಿಗೆ ವಿಜಯ ಮಾಲೆ ಹಾಕಲಿದ್ದಾರೆ ಕಾದು ನೋಡಬೇಕಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top