ರಾಜಕೀಯ

ಮೊದಲ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಸಿದ್ದರಾಮಯ್ಯ ಮನೆಗೆ ಓಡಿದ ಹ್ಯಾರಿಸ್

ನಿನ್ನೆ ರಾತ್ರಿ ಅಳೆದು ತೂಗಿ ಕೊನೆಗೂ ಕಾಂಗ್ರೆಸ್ ಕೊನೆಗೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಅದರ ಕೆಲವೆಡೆ ಬಂಡಾಯವು ಶುರುವಾಗಿದೆ. ಇನ್ನು ಶಾಂತಿನಗರ ಶಾಸಕ ಹ್ಯಾರಿಸ್ ಹೆಸರು ಪಟ್ಟಿಯಲ್ಲಿ ಇಲ್ಲ. ಇದರಿಂದ ಕಳವಳಗೊಂಡಿರುವ ಹ್ಯಾರಿಸ್ ಸಿದ್ದರಾಮಯ್ಯನವರ ಮನೆಗೆ ನಿನ್ನೆ ರಾತ್ರಿಯೇ ದೌಡಾಯಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಗ ಮೊಹಮ್ಮದ್ ನಲಪಾಡ್ ಮಾಡಿರುವ ಹಲ್ಲೆ ಪ್ರಕರಣದಿಂದಾಗಿ ಈ ಬಾರಿ ಹ್ಯಾರಿಸ್ ಗೆ ಟಿಕೆಟ್ ನೀಡಬೇಡಿ ಎಂದು ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಹ್ಯಾರಿಸ್ ಗೆ ಟಿಕೆಟ್ ನೀಡಲಾಗಿಲ್ಲ. ಆದರೆ ಅವರು ಪ್ರತಿನಿಧಿಸುವ ಶಾಂತಿ ನಗರ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಇನ್ನು ಘೋಷಣೆ ಮಾಡಿಲ್ಲ ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಕುತೂಹಲ ಮೂಡಿಸಿದೆ ಎಂದು ತಿಳಿದು ಬಂದಿದೆ.

 

 

ನಿನ್ನೆ ಬಿಡುಗಡೆ ಆದ ಪಟ್ಟಿಯಲ್ಲಿ 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ 5 ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಸರು ಬಿಡುಗಡೆ ಆಗಿದೆ. ಉಳಿದಂತೆ ಮೇಲುಕೋಟೆಯಲ್ಲಿ ರೈತನಾಯಕ ಪುಟ್ಟಣ್ಣಯ್ಯ ಮಗನಾದ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡಿ ಅಭ್ಯರ್ಥಿ ಘೋಷಣೆ ಮಾಡಿಲ್ಲ ಎಂದು ತಿಳಿದು ಬಂದಿದೆ.

 

ಇನ್ನು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಆರ್.ಬಿ. ತಿಮ್ಮಾಪುರ ಅವರಿಗೆ ಟಿಕೆಟ್ ಕೈ ತಪ್ಪಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆರ್.ಬಿ. ತಿಮ್ಮಾಪುರ ಬೆಂಬಲಿಗಳು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top