ರಾಜಕೀಯ

ಕರ್ನಾಟಕ ಚುನಾವಣೆಯಲ್ಲಿ ಒವೈಸಿ ಪಕ್ಷ ಸ್ಪರ್ಧಿಸಲ್ಲ. ಜೆಡಿಎಸ್ ಗೆ ಬೆಂಬಲ ಸೂಚಿಸಿದ ಒವೈಸಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧೆ ಮಾಡುತ್ತ ಇಲ್ಲವೋ ಯಾರಿಗಾದರೂ ಬೆಂಬಲ ನೀಡುತ್ತಾ ಎಂಬ ಕುತೂಹಲ ಮೂಡಿಸಿತ್ತು. ಈ ಬಗ್ಗೆ ಮಾಹಿತಿ ಈಗ ಹೊರಬಿದ್ದಿದೆ.

 

 

 

ಎಐಎಂಐಎಂ ಕರ್ನಾಟಕದಲ್ಲಿ ಸ್ಫರ್ಧೆ ಮಾಡುವುದಿಲ್ಲ ಎಂದು ಎಂದು ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಘೋಷಣೆ ಮಾಡಿದ್ದಾರೆ. ಈಗ ಕರ್ನಾಟಕ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್‌ ಒವೈಸಿ, ನಾವು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲಿಸಲಿದ್ದು, ಆ ಪಕ್ಷದ ಪರವಾಗಿಯೇ ಪ್ರಚಾರ ಮಾಡುತ್ತೇವೆ ಎಂದು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.

 

 

 

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗು ಕಾಂಗ್ರೆಸ್‌ ವಿಫಲ ಆಗಿವೆ, ಎರಡೂ ಒಂದೇ ನ್ಯಾಣದ ಎರಡು ಮುಖಗಳೆಂದು ಅಸಾದುದ್ದೀನ್‌ ಒವೈಸಿ ನೇರವಾಗಿ ಆರೋಪ ಮಾಡಿದ್ದಾರೆ.

 

 

ಮೇ 12 ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಮೇ 15 ಕ್ಕೆ ಚುನಾವಣಾ ಫಲಿತಾಂಶ ಬರಲಿದೆ. ಯಾವ ಪಕ್ಷ ಬಹುಮತ ಪಡೆಯಲಿದೆ ಎಂದು ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top