ಸಾಧನೆ

ಪಿಯುಸಿಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ

ಇಂದು ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರು ಮಾಹಿತಿ ತಿಳಿಸಿದ್ದಾರೆ. ಈ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇದೆ, 91.49, ದ್ವಿತೀಯ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ, ಇನ್ನು ತೃತೀಯ ಸ್ಥಾನದಲ್ಲಿ ಸ್ಥಾನದಲ್ಲಿ ಕೊಡಗು ಜಿಲ್ಲೆಯಿದೆ ಮತ್ತು ಚಿಕ್ಕೋಡಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

 

ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ 6,85,713 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 4,08, 421 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 68ರಷ್ಟು, ವಾಣಿಜ್ಯ ಶೇಕಡಾ 63 ಮತ್ತು ಕಲಾ ವಿಭಾಗದಲ್ಲಿ ಶೇಕಡಾ 45ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

 

ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಈ ಸಾಲಿನಲ್ಲಿ 6,85,713 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 4,08, 421 ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ವಿಜ್ಞಾನ ವಿಭಾಗದಲ್ಲಿ 68%, ವಾಣಿಜ್ಯ 63% ಮತ್ತು ಕಲಾ ವಿಭಾಗದಲ್ಲಿ 45% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ ಎಂದು ತಿಳಿದು ಬಂದಿದೆ. 118 ಕಾಲೇಜುಗಳ ಶೂನ್ಯ ಸಾಧನೆ ಮಾಡಿದೆ ಎಂದು ತಿಳಿದು ಬಂದಿದೆ. ಸರ್ಕಾರಿ ಕಾಲೇಜು -3, ಖಾಸಗಿ ಕಾಲೇಜು -122, ಅನುದಾನಿತ ಕಾಲೇಜು -3.

 

 

http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ. ಇಂದು ಬೆಳಿಗ್ಗೆ 11 ಕ್ಕೆ ಫಲಿತಾಂಶ ಹೊರಬಿದ್ದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top