ಸಮಾಚಾರ

ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಕಡೆಯಿಂದ ಅಶ್ಲೀಲ ನೃತ್ಯ ಪ್ರದರ್ಶನ

ಇನ್ನೇನು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಮೇ ಹನ್ನೆರಡನೇ ತಾರೀಕಿನಿಂದ ಇನ್ನೂರ ಇಪ್ಪತ್ನಾಲ್ಕು ಕ್ಷೇತ್ರಗಳಿಗೆ ವಿಧಾನಸಭೆಯ ಚುನಾವಣೆ ನಡೆಯಲಿದೆ ಈ ಸಮಯದಲ್ಲಿ ಅಭ್ಯರ್ಥಿಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವರ್ಲಕೊಂಡ ಗ್ರಾಮದಲ್ಲಿ ತೃತೀಯ ಲಿಂಗೀಯರಿಂದ ಭರ್ಜರಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಂದು ತಿಳಿದು ಬಂದಿದೆ.

 

 

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಎನ್.ಸುಬ್ಬಾರೆಡ್ಡಿ ರವರ ಪ್ರಚಾರ ಕಾರ್ಯಕ್ರಮದಲ್ಲಿ ತೃತೀಯ ಲಿಂಗೀಯರಿಂದ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗ್ರಾಮಕ್ಕೆ ಪ್ರಚಾರ ನಿಮಿತ್ಯ ಆಗಮಿಸಿದ್ದರು ಅವರು ಬರುವ ಮೊದಲು ಜನರನ್ನು ಸೇರಿಸುವ ಉದ್ದೇಶದಿಂದ ಲಿಂಗತ್ವ ಅಲ್ಪಸಂಖ್ಯಾತರಿಂದ ಡಾನ್ಸ್ ಕಾರ್ಯಕ್ರಮ ಮಾಡಿಸಲಾಗಿತ್ತು ಎನ್ನಲಾಗಿದೆ. ಅಲ್ಲಿದ್ದ ಕೆಲವರು ಎದೆ ಭಾಗವನ್ನು ಮುಟ್ಟಿ ಅಶ್ಲೀಲ ರೀತಿಯಲ್ಲಿ ವರ್ತನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವರ ಅಸಭ್ಯ ವರ್ತನೆಗಳು ಈಗ ಚರ್ಚೆಗೆ ಗ್ರಾಸವಾಗಿದೆ.

 

 

ಚುನಾವಣಾ ಆಯೋಗವು ಇಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top