ಸಮಾಚಾರ

ಕುಮಾರ ಸ್ವಾಮಿ ಬಿಜೆಪಿ ಜೊತೆ ಸೇರ್ಕೊಂಡ್ರೆ ಮನೆಯಿಂದಲೇ ಗೇಟ್ ಪಾಸ್ ಕೊಡ್ತೀವಿ – ದೇವೆ ಗೌಡ್ರು

ಇನ್ನೇನು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಮೇ ಹನ್ನೆರಡನೇ ತಾರೀಕಿನಿಂದ ಇನ್ನೂರ ಇಪ್ಪತ್ನಾಲ್ಕು ಕ್ಷೇತ್ರಗಳಿಗೆ ವಿಧಾನಸಭೆಯ ಚುನಾವಣೆ ನಡೆಯಲಿದೆ ಈ ಸಮಯದಲ್ಲಿ ಅಭ್ಯರ್ಥಿಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ.

 

 

ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದ್ದೆ ಇದಕ್ಕೆ ಪ್ರತಿಕ್ರಿಯೆ ನೀಡಿದ ದೇವೇಗೌಡರು ‘ಬಿಜೆಪಿ ಜತೆ ಕುಮಾರಸ್ವಾಮಿ ಹೋಗೋದನ್ನ ನಾನು ಒಪ್ಪುವುದಿಲ್ಲ ಎಂದಿರುವುದು ನಿಜ. ಇದರಲ್ಲಿ ತಪ್ಪೇನಿದೆ? ನಾವು ಬಹುಮತ ಪಡೆದೇ ಸರ್ಕಾರ ರಚನೆ ಮಾಡುತ್ತೇವೆ ಎಂದೂ ಹೇಳಿದ್ದೇನೆ. ಅತಂತ್ರ ಚುನಾವಣಾ ಫಲಿತಾಂಶ ಬಂದ್ರೆ ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ’ ಎಂದು ಅವರು ಸ್ಪಷಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

”ಇಂತದ್ದೇ ಪರಿಸ್ಥಿತಿ ನಿರ್ಮಾಣಗೊಂಡರೂ ತಮ್ಮ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ತಮ್ಮ ಈ ನಿಲುವಿಗೆ ಎಚ್.ಡಿ. ಕುಮಾರಸ್ವಾಮಿ ಬದ್ಧರಾಗಿದ್ದಾರೆ.ಹಾಗೊಂದು ವೇಳೆ ಬಿಜೆಪಿ ಜೊತೆಗೆ ಸೇರಿ ಸರಕಾರ ರಚಿಸಿದರೆ ಕುಮಾರಸ್ವಾಮಿ ಅವರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುತ್ತೇನೆ,” ಎಂದು ದೇವೆಗೌಡರು ಖಡಕ್‌ ಆಗಿ ಹೇಳಿದ್ದಾರೆ .

 

 

ಮೇ 15 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು ಯಾವ ಪಕ್ಷ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಕಾದು ನೋಡಬೇಕಿದೆ. ಒಂದು ವೇಳೆ ಅತಂತ್ರ ಸರ್ಕಾರವಾದರೆ ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷಕ್ಕೆ ಜೆಡಿಎಸ್ ಅನಿವಾರ್ಯವಾಗುತ್ತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top