ಸಿನಿಮಾ

ಅಪ್ಪನ ಬಾಯಿಗೆ ಹಲ್ವಾ ಹಾಕಿದ ಸಿಹಿ ಕಹಿ ಚಂದ್ರು ಪುತ್ರಿ

ನಿನ್ನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರು ಮಾಹಿತಿ ತಿಳಿಸಿದ್ದಾರೆ. ಈ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇದೆ, 91.49, ದ್ವಿತೀಯ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ, ಇನ್ನು ತೃತೀಯ ಸ್ಥಾನದಲ್ಲಿ ಸ್ಥಾನದಲ್ಲಿ ಕೊಡಗು ಜಿಲ್ಲೆಯಿದೆ ಮತ್ತು ಚಿಕ್ಕೋಡಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

 

 

ಹಾಸ್ಯ ನಟ ಸಿಹಿಕಹಿ ಚಂದ್ರು ರವರ ಪುತ್ರಿ ಕೂಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿದ್ದಾಳೆ. ಚಂದ್ರು ಅವರ ಎರಡನೇ ಮಗಳು ಖುಷಿ ಚಂದ್ರಶೇಖರ್​ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದಾರೆ ಎಂದು ತಿಳಿದು ಬಂದಿದೆ. ಸಿಹಿ ಕಹಿ ಚಂದ್ರು ಅವರ ಮೊದಲ ಮಗಳು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಚಂದ್ರು ಅವರ ಎರಡನೇ ಮಗಳು ಖುಷಿ ಯಾರಿಗೂ ಪರಿಚಯವಿಲ್ಲ. ಅವರೆಲ್ಲೂ ಕಾಣಿಸಿಕೊಂಡಿಲ್ಲ. ಸದ್ಯ ಬೆಂಗಳೂರಿನ ಕ್ರೈಸ್ತ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ( ಎಚ್ ಹಿ ಪಿ ಸಿ) ಓದುತ್ತಿದ್ದು ಶೇಕಡ 88 ಅಂಕ ಪಡೆದು ತಂದೆಗೆ ಹೆಮ್ಮೆ ಪಡುವಂತೆ ಮಾಡಿದ್ದಾರೆ.

 

 

ಈ ಬಾರಿಯ ಫಲಿತಾಂಶದಲ್ಲಿ ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ 6,85,713 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 4,08, 421 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 68ರಷ್ಟು, ವಾಣಿಜ್ಯ ಶೇಕಡಾ 63 ಮತ್ತು ಕಲಾ ವಿಭಾಗದಲ್ಲಿ ಶೇಕಡಾ 45ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top