ಸಮಾಚಾರ

ಬ್ರೇಕಿಂಗ್ ನ್ಯೂಸ್: ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರು.

ಈ ಭಾರಿ ಕರ್ನಾಟಕ ವಿಧಾನಸಭೆ ಅತಂತ್ರವಾಗಿರೋ ಕಾರಣ ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಪಡೆದುಕೊಳ್ಳುತ್ತಿದ್ದು ಈಗಾಗಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಹಾಗೂ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಯಾರು ರಚಿಸಬೇಕೆಂಬುದು ತಲೆನೋವಾಗಿ ಪರಿಣಮಿಸಿದ್ದು, ಇದೀಗ ಚೆಂಡು ರಾಜ್ಯಪಾಲ ವಜೂಬಾಯಿ ವಾಲಾ ಅಂಗಳದಲ್ಲಿ ಬಂದು ಬಿದ್ದಿದೆ.

 

ಬಹುಮತದಷ್ಟು ಸಂಖ್ಯಾಬಲ ಇಲ್ಲದಿದ್ದರೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸುವ ಮೊದಲ ಅವಕಾಶ ನೀಡುತ್ತಾರೆಯೇ ಅಥವಾ ಬಹುಮತಕ್ಕೆ ಬೇಕಾದ ಸಂಖ್ಯಾಬಲ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಆಹ್ವಾನ ಕೊಡುತ್ತಾರೆಯೇ ಎಂಬ ಕುತೂಹಲ ಕೆರಳಿತ್ತು ಇದೀಗ ಆ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಿದ್ದು 104 ಸ್ಥಾನಗಳನ್ನು ಪಡೆಯುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲ ವಾಜುಭಾಯಿ ವಾಲಾ ಸರ್ಕಾರ ರಚಿಸುವುದಕ್ಕೆ ಆಹ್ವಾನ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

 

 

ಸಾಂಪ್ರದಾಯಕವಾಗಿ ಫಲಿತಾಂಶದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಬಿಜೆಪಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ನೆನ್ನೆ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂ ರಪ್ಪ, ಕೇಂದ್ರ ಸಚಿವ ಅನಂತಕುಮಾರ್ ಮತ್ತಿತರ ನಾಯಕರು ಅತಿದೊಡ್ಡ ಪಕ್ಷವಾಗಿರುವ ತಮಗೇ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇಟ್ಟಿ ದ್ದರು. ಈ ನಿಟ್ಟಿನಲ್ಲಿ ಸಂವಿದಾನ ತಜ್ಞರ ಜೊತೆ ಸಂವಾದ ನಡೆಸಿ ರಾಜ್ಯಪಾಲರು ಈ ನಿರ್ಧಾರಕ್ಕೆ ಬಂದಿದ್ದು ಬಹುಮತ ಸಭೀತಿಗೆ ಒಂದುವಾರಗಳ ಕಾಲಾವಕಾಶ ನೀಡಿದ್ದಾರೆ ಎನ್ನಲಾಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top