ಸಮಾಚಾರ

ಗಳಗಳನೆ ಅತ್ತು ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ವಿಜಯಾನಂದ್ ಕಾಶಪ್ಪನವರ್

ಬಾಗಲಕೋಟೆ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಏಳು ಕ್ಷೇತ್ರದಲ್ಲಿ ಎರಡರಲ್ಲಿ ಮಾತ್ರ ಗೆದ್ದು ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ ಇಲ್ಲಿ ಆರರಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಸಚಿವೆ ಉಮಾಶ್ರೀ ಕೂಡ ಈ ಬಾರಿ ಸೋಲು ಅನುಭವಿಸಿದ್ದಾರೆ. ಇನ್ನು ಹುಂಡಂನಿಂದ ಕ್ಷೇತ್ರದಳ್ಳಿ ಸೋತಿರುವ ಕಾಂಗ್ರೆಸ್ ಅಭ್ಯರ್ಥಿ ಆತ್ಮಾವಲೋಕನ ಸಭೆಯಲ್ಲಿ ಮಾಡಿದ್ದರು. ಈ ಸಭೆಯಲ್ಲಿ ಅವರು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

 

 

ಕಾಂಗ್ರೆಸ್ ಪಕ್ಷವನ್ನು ಮಣ್ಣು ಮಾಡುವವರು ಕಾಂಗ್ರೆಸ್ ಪಕ್ಷದವರೇ. ಪಕ್ಷಕ್ಕಾಗಿ ಏನೂ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ ಅವರನ್ನೇ ಸೋಲಿಸಲು ಹೊರಟಿದ್ದರು. ಎಂದು ಪರೋಕ್ಷವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್, ಆರ್ ಬಿ ತಿಮ್ಮಾಪುರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

 

ನಾನು ಸೋಲನ್ನಪ್ಪಲು ಈ ಇಬ್ಬರೇ ಕಾರಣ. ನನ್ನ ಕ್ಷೇತ್ರಕ್ಕೆ ಒಂದೇ ಒಂದು ಬಾರಿಯೂ ಕೂಡ ಕಾಲಿಡಲಿಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ, ಎಐಸಿಸಿ ಅಧ್ಯಕ್ಷರಿಗೆ ಮಾತನಾಡಿದ್ದೇನೆ ಅಂತ ಆತ್ಮಾವಲೋಕನ ಸಭೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇದೆ ವೇಳೆ ವಿಜಯಾನಂದ ಕಾಶಪ್ಪನವರ, ಶಾಸಕರು ನಮ್ಮ ಕಾರ್ಯಕರ್ತರಿಗೆ ಏನಾದರೂ ತೊಂದರೆ ಕೊಟ್ರೆ ಸುಮ್ಮನೆ ಇರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top