ಸಮಾಚಾರ

ಸಚಿವ ಸ್ಥಾನ ಹಂಚಿಕೆಯಾಯ್ತು ಇನ್ಮೇಲೆ ಜಿಲ್ಲಾ ಉಸ್ತುವಾರಿ ಸರ್ಕಸ್ ಶುರು

ಕಾಂಗ್ರೆಸ್ ಹಾಗು ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಒಂದು ಹಂತಕ್ಕೆ ಮುಗಿದಿದೆ. ಈಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಕೆಲ ಖಾತೆ ಬದಲಾವಣೆ ಕೂಡ ಮಾಡುತ್ತಿದ್ದಾರೆ ಎನ್ನಲಾಗಿದೆ. ಮಾತುಕತೆಯ ಫಲವಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರಿಗೆ ಬೇರೊಂದು ಹೆಚ್ಚುವರಿ ಖಾತೆಯ ಜತೆಗೆ ‘ಧಿಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ’ ಸ್ಥಾನ ದೊರೆಯುವ ಸಾಧ್ಯತೆಯಿದೆ ಎನ್ನುವ ಮಾತು ಕೇಳಿ ಬರುತ್ತಿವೆ.

 

 

ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‍ನಲ್ಲಿ ಭಿನ್ನಮತ ಬಹುತೇಕ ಶಮನವಾಗಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡಲು ತಯಾರಾಗಿದ್ದಾರೆ.. ಪ್ರತಿಷ್ಠಿತ ರಾಮನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೇ ನೀಡಲು ಮುಂದಾಗಿದ್ದಾರೆ.

ಜೆಡಿಎಸ್ ಹಾಗು ಕಾಂಗ್ರೆಸ್ ನಡುವೆ ಯಾವುದೇ ರೀತಿಯ ತಾರತಮ್ಯ ಬರಬಾರದೆಂದು ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‍ ರವರಿಗೆ ತಮ್ಮ ತವರು ಜಿಲ್ಲೆಯನ್ನು ಉಸ್ತುವಾರಿ ನೀಡುವ ಮೂಲಕ ರಾಜಕೀಯ ಜಾಣ್ಮೆ ಪ್ರದರ್ಶಿಸಿಸಲು ತೀರ್ಮಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಚ್.ಡಿ.ರೇವಣ್ಣಗೆ ಹಾಸನ, ಮೈಸೂರಿಗೆ ಜಿ.ಟಿ.ದೇವೇಗೌಡ, ತುಮಕೂರಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top