ಸಮಾಚಾರ

ಲೋಕಸಭೆಯಲ್ಲಿ ಬಿಜೆಪಿ ಸೋಲಿಸಲು ಮಾಸ್ಟರ್ ಪ್ಲಾನ್ ಮಾಡಿದ ದೇವೇಗೌಡರು

2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಇಂದು ನಡೆದ ಜೆಡಿಎಸ್‍ ಪಕ್ಷದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ವಿರುದ್ಧ ಗುಡುಗಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ನಾವು ಎಷ್ಟು ಸೀಟು ಗೆಲ್ತೀವಿ ಎಂಬುದು ಮುಖ್ಯವಲ್ಲ, ಕಾಂಗ್ರೆಸ್ ಜೊತೆ ಸೇರಿ ಬಿಜೆಪಿ ಹಿನ್ನಡೆಗೆ ನಾವು ಮುಂದಾಗಬೇಕು ಎಂದು ಹೇಳಿದ್ದಾರೆ. ನಮ್ಮ ಗುರಿ ಕೇವಲ ಬಿಜೆಪಿಯನ್ನು ಸೋಲಿಸುವುದು ಮಾತ್ರ. ಇದನ್ನು ಎಲ್ಲರೂ ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಬಿಜೆಪಿ ವಿರುದ್ಧ ಕಹಳೆ ಊದಿದ್ದಾರೆ.

 

 

 

 

ವಿಪಕ್ಷಗಳು ಒಂದಾಗಿ ಚುನಾವಣೆ ಎದುರಿಸುತ್ತಿರುವುದರಿಂದ ಚಿಂತೆಗೀಡಾಗಿರುವ ಬಿಜೆಪಿ ಕೂಡ ಲೋಕಸಭಾ ಚುನಾವಣೆಗೆ ವಿಭಿನ್ನ ತಂತ್ರಗಳನ್ನು ಹೆಣೆಯುತ್ತಿಗೆ. ಕಾಂಗ್ರೆಸ್ ಕೂಡ ತನ್ನದೇ ಆದ ತಂತ್ರದೊಂದಿಗೆ ಜೆಡಿಎಸ್ ಜೊತೆ ಕೆಲವು ಕಡೆ ಮೈತ್ರಿ ಕೂಡ ಮಾಡಿಕೊಳ್ಳಲಿದೆ ಎಂದು ತಿಳಿದು ಬಂದಿದೆ.

ಇನ್ನು ಸಾಲ ಮನ್ನಾ ಬಗ್ಗೆ ಮಾತನಾಡಿದ ದೇವೇಗೌಡರು, ಮುಖ್ಯಮಂತ್ರಿಗಳು ಈಗಾಗಲೇ ರೈತರ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಿದ್ದಾರೆ. ಸಾಲಮನ್ನಾ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top