ಸಮಾಚಾರ

ಅಂತೂ ಇಂತೂ ಜಾಮೀನು ಗಿಟ್ಟಿಸಿಕೊಂಡ ಮೊಹಮದ್ ನಲಪಾಡ್..

ಬಹುಕೋಟಿ ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಮೇಲಿನ ಹಲ್ಲೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್’ಗೆ ಅಂತೂ ಇಂತೂ ಜಾಮೀನು ಲಭಿಸಿದೆ. ಕರ್ನಾಟಕ ಹೈಕೋರ್ಟ್ ನಲಪಾಡ್’ಗೆ ಶರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದ್ದು ಈ ಮೂಲಕ ಕಳೆದ 116 ದಿನಗಳಿಂದ ಜೈಲಿನಲ್ಲೇ ಕೊಳೆಯುತ್ತಿದ್ದ ನಲಪಾಡ್ ಹೊರಜಗತ್ತಿಗೆ ಕಾಲಿಡಲು ಉತ್ಸುಕನಾಗಿದ್ದಾನೆ.

 

 

ಎರಡು ಕಡೆಯ ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಕೈಕೆಲ್ ಡಿಕುನ್ಹಾ ಅವರು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಅಂದಿನಂತೆ ಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್ ನ ಇಬ್ಬರ ಶೂರಿಟಿ , ಪಾಸ್ ಪೋರ್ಟ್ ಅನ್ನು ಕೋರ್ಟಿಗೆ ಒಪ್ಪಿಸುವಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಸಾಕ್ಷ್ಯನಾಶಕ್ಕೆ ಪ್ರಯತ್ನಿಸಬಾರದೆಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನಲಪಾಡ್​ಗೆ ನೀಡಲಾಗಿದೆ.

ಏನಿದು ಪ್ರಕರಣ?:
ಕಳೆದ ಫೆಬ್ರವರಿ 17ರಂದು ಯುಬಿ ಸಿಟಿಯ ರೆಸ್ಟೊರೆಂಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಹುಕೋಟಿ ಉದ್ಯಮಿ ಯುವಕನೊಬ್ಬನ ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಮತ್ತು ಆತನ ಹತ್ತಕ್ಕೂ ಹೆಚ್ಚು ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮೂರು ದಿನಗಳ ನಂತರ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದರು. ಅವತ್ತಿನಿಂದ ಇವತ್ತಿನವರೆಗೂ ಜೈಲಿನಲ್ಲೇ ನಲಪಾಡ್ ಮತ್ತು ಆತನ ಸ್ನೇಹಿತರು ಜೈಲಿನಲ್ಲೇ ಮುದ್ದೆ ಮುರಿಯುತ್ತಿದ್ದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top