ಸಮಾಚಾರ

ಲೋಕಸಭೆಗೆ ರೆಬೆಲ್ ಸ್ಟಾರ್ ಅಂಬಿ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಈ ಈ ಕ್ಷೇತ್ರಗಳಿಂದ ಸ್ವರ್ಧಿಸುತ್ತಾರಂತೆ,ನೋಡಿ ಯಾವುದು ಕ್ಷೇತ್ರ ಅಂತ

ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗು ರಾಷ್ಟ್ರಿಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ರಮ್ಯಾ ಈಗ ಸಂಪೂರ್ಣವಾಗಿ ರಾಜಕೀಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಫೇಸ್ಬುಕ್, ಟ್ವಿಟ್ಟರ್ ಹೀಗೆ ಎಲ್ಲ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ಲೋಕಸಭೆಯಲ್ಲಿ ರಮ್ಯಾ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದ್ದು. ಈ ಬಾರಿ ಮಂಡ್ಯದಲ್ಲಿ ರಮ್ಯಾ ಸ್ಪರ್ಧೆ ಮಾಡದೇ ಬೆಂಗಳೂರಿನ ಕಡೆ ಮುಖ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ರಮ್ಯಾರನ್ನು ಕಣಕ್ಕಿಳಿಸುವ ಯೋಚನೆಯನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

 

 

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆರೋಗ್ಯದ ನೆಪ ಹೇಳಿ ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಈ ಹೊಸ ಸುದ್ದಿಯೊಂದು ಬಂದಿದ್ದು ಅಂಬಿಯನ್ನು ಲೋಕಸಭೆಯಲ್ಲಿ ಸ್ಪರ್ಧೆಗೆ ಇಳಿಸಲು ಕಾಂಗ್ರೆಸ್ ತೆರೆ ಮರೆಯಲ್ಲಿ ಪ್ಲಾನ್ ಮಾಡುತ್ತಿದೆ ಎನ್ನಲಾಗಿದೆ. ಅಂಬರೀಶ್​ ಅವರನ್ನು ಮೈಸೂರು ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಯೋಚಿಸಿದ್ದಾರೆ. ಅಂಬರೀಶ್ ಒಪ್ಪಿದರೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಖುದ್ದು ಸಿದ್ದರಾಮಯ್ಯ ರವರು ಕೂಡ ಹೇಳಿದ್ದಾರೆ.

ಅಂಬರೀಷ್ ಅವರ ಅನುಪಸ್ಥಿತಿಯಿಂದ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಾದ ನಷ್ಟವನ್ನು ಅರಿವಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಗಲಿಗೆ ಅಂಬಿ ಮನವೊಲಿಸುವ ಜವಾಬ್ದಾರಿ ವಹಿಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಅಂಬರೀಷ್ ಸ್ಪರ್ಧೆಗೆ ಒಪ್ಪಿದರೆ ಈ ಕ್ಷೇತ್ರ ಕುತೂಹಲ ಮೂಡಿಸಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top