ಮನೋರಂಜನೆ

ಬಿಗ್‌ಬಾಸ್-6ರ ಮನೆ ಸೇರಲಿದ್ದಾರಂತೆ ಐದು ರೂಪಾಯಿ ಡಾಕ್ಟರ್ ಶಂಕರೇಗೌಡ.

ಕನ್ನಡ ಕಿರುತೆರೆಯ ಅತಿದೊಡ್ಡ ಮತ್ತು ಜನಪ್ರಿಯ ರಿಯಾಲಿಟಿ ಷೋ ಎಂಬ ಹೆಸರು ಗಿಟ್ಟಿಸಿರುವ ಬಿಗ್’ಬಾಸ್ ಕಾರ್ಯಕ್ರಮದ ಐದನೇ ಸೀಸನ್ ಮುಗಿದು ಇನ್ನೂ ಐದಾರು ತಿಂಗಳುಗಳು ಮಾತ್ರವೇ ಸವೆದಿದೆ. ಹೀಗಿದ್ದರೂ ಅದಾಗಲೇ ಮತ್ತೊಂದು ಸೀಸನ್ನಿನ ಬಗ್ಗೆ ನಾನಾ ಗಾಸಿಪ್’ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.. ಒಂದಷ್ಟು ಮನರಂಜನೆಯ ಜೊತೆಗೆ ಸ್ಪರ್ಧಿಗಳ ನಡುವಿನ ರಂಪಾಟ, ಸಣ್ಣತನ, ಕಿರಿಕ್ಕುಗಳೇ ಜೀವಾಳವಾಗಿರೋ ಈ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಜನರಿಗೆ ತಕರಾರಿದೆ. ಇದು ನಮ್ಮ ಕನ್ನಡ ನೆಲಕ್ಕೆ ಒಗ್ಗದ ಕಾನ್ಸೆಪ್ಟ್ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿರುತ್ತದೆ. ಇಂಥ ನೂರೆಂಟು ತಾತ್ಸಾರದ ಮಾತುಗಳ ನಡುವೆಯೂ ಬರೋಬ್ಬರಿ ಐದು ಸೀಸನ್ನುಗಳನ್ನು ಮುಗಿಸಿರುವ ಬಿಗ್ ಬಾಸ್ ಇದೀಗ ಆರನೇ ಬಾರಿಗೆ ಕನ್ನಡ ಪ್ರೇಕ್ಷಕರ ಬಳಿಗೆ ಲಗ್ಗೆಯಿಡುತ್ತಿದೆ..

 

 

ಇಂಥಾ ಬಿಗ್ ಬಾಸ್ ಮನೆಗೆ ಈ ಭಾರಿ ಅವರು ಹೋಗ್ತಾರಂತೆ ಇವರು ಹೋಗ್ತಾರಂತೆ ಎಂಬಂತ ರೂಮರುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕಾಪಟ್ಟೆ ಹರಿದಾಡುತ್ತಿದ್ದು ಅದರಲ್ಲಿ ಮಂಡ್ಯದ ಶಂಕರೇಗೌಡ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.. ವೃತ್ತಿಯಲ್ಲಿ ವೈದ್ಯರಾಗಿರುವ ಶಂಕರೇಗೌಡ ರೋಗಿಗಳ ಬಳಿ ಕೇವಲ ಐದು ರೂಪಾಯಿಗಳನ್ನು ಪಡೆದು ಕಾಯಿಲೆಗೆ ಚಿಕಿತ್ಸೆ ನೀಡುವ ಮೂಲಕ ಸುತ್ತ ಮುತ್ತ ಒಳ್ಳೆಯ ಹೆಸರು ಸಂಪಾದಿಸಿಕೊಂಡಿದ್ದಾರೆ. ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದರು.. ಇಂಥಾ ಶಂಕರೇಗೌಡ ಅವರು ಬಿಗ್ ಬಾಸ್ ಮನೆ ಸೇರಿಕೊಳ್ಳಲಿದ್ದಾರೆ ಎಂಬಂತ ಸುದ್ದಿಯೊಂದು ಹರಿದಾಡುತ್ತಿದ್ದು ಅದು ನಿಜವೇ? ಸುಳ್ಳೇ? ಎಂಬುದನ್ನು ಕಾಲವೇ ಉತ್ತರಿಸಲಿದೆ.

ಬಿಗ್ ಬಾಸ್ ಮನೆಯೊಳಗೇ ಕಾಲಿಡಲಿರುವ ಸಂಭಾವ್ಯರ ಪಟ್ಟಿ ಹೀಗಿದೆ.
1.ಹೇಮಲತಾ – ಖಾಸಗಿ ಟಿವಿ ನಿರೂಪಕಿ
2. ಒಗ್ಗರಣೆ ಡಬ್ಬಿ ಖ್ಯಾತಿಯ ಮುರುಳಿ.
3.ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ,
4.ನಟ ಮಂಡ್ಯ ರಮೇಶ್,
5. ಡಬ್ ಸ್ಮಾಷ್ ಕುಖ್ಯಾತಿಯ ತುಳಸಿ ಪ್ರಸಾದ್.
6.ನಟಿ ಸುಮನ್​ ರಂಗನಾಥ್​​
7. ನಟಿ ಪ್ರೇಮಾ
8.ಪ್ರೇಮಕುಮಾರಿ –
9.ಗುರುಕಿರಣ್​​​
10.ನವೀನ್​​ ಕೃಷ್ಣ- ನಟ
11.ಸರಿಗಮಪ ಶೋ ಮೂಲಕ ಚಾಲ್ತಿಗೆ ಬಂದಿದ್ದ ಗಾಯಕ ಚನ್ನಪ್ಪ
12. ಕಲಾಸಾಮ್ರಾಟ್ ಎಸ್.ನಾರಾಯಣ್
13.ಶಂಕರೇಗೌಡ- 5 ರೂಪಾಯಿ ಡಾಕ್ಟರ್
ಹಾಗು ಆರು ಮಂದಿ ಸಾಮಾನ್ಯ ಜನರು

ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಬಿಗ್ ಬಾಸ್ ಶೋನ ಆರನೇ ಅವತರಣಿಕೆಗೆ ಈಗಾಗಲೇ ಸ್ಪರ್ಧಿಗಳನ್ನು ಆಯ್ಕೆಯ ಪ್ರಕ್ರಿಯೆ ನಡೆಯುತ್ತಿದ್ದು ಅದಕ್ಕೆ ಸಂಭಂದಪಟ್ಟ ಕೆಲಸಗಳನ್ನೂ ಈಗಾಗಲೇ ಶುರುವಿಟ್ಟುಕೊಂಡಿದ್ದರಂತೆ.. ಒಟ್ಟಿನಲ್ಲಿ ಎಲ್ಲ ಅಂದುಕೊಂಡಂತೆ ಆದರೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ಹೊಸ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಕಾಲಿಡೋದಂತೂ ಕನ್ಫರ್ಮ್ ಅಂತೇ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top