ಸಮಾಚಾರ

ಪುತ್ರನಿಗೆ ಶಹಬಾಷ್ ಎಂದ್ರು ಮಾಜಿ ಪ್ರಧಾನಿ H.D ದೇವೇಗೌಡ.

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ತಮ್ಮ ಪುತ್ರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಭೇಷ್ ಅಂದಿದ್ದಾರೆ. ಹೌದು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸಿ ಬೆಲೆ ಕಡಿಮೆ ಮಾಡಿದ್ದಕ್ಕೆ ದೊಡ್ಡ ಗೌಡರು ಖುಷಿಗೊಂಡಿದ್ದು ಕುಮಾರಸ್ವಾಮಿ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಟೈಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ದೇವೇಗೌಡ್ರು “ಇಂಧನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿ ಇಳಿಸಲು ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಪ್ರಶಂಸನೀಯವಾಗಿದೆ. ” ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಬೆನ್ನು ತಟ್ಟಿದ್ದಾರೆ.

ಅಷ್ಟೇ ಅಲ್ಲದೇ ಇಂಧನ ಬೆಲೆ ಇಳಿಕೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಪ್ರಧಾನಿ ಮೋದಿಗೆ ಆಗ್ರಹಿಸಿರುವ ದೇವೇಗೌಡರು “ಮುಂದಿನ ದಿನಗಳಲ್ಲಿ ಜನರ ಮೇಲಿನ ಹಣದ ಹೊರೆಯನ್ನು ಕಡಿಮೆ ಮಾಡಿಕೊಡಲು ನರೇಂದ್ರ ಮೋದಿ ಸರ್ಕಾರವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

 

 

“ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ತೈಲ ದರ ಏರಿಕೆಯು ದಿನನಿತ್ಯ ಬಳಸುವ ವಸ್ತುಗಳ ದರವನ್ನೂ ಹೆಚ್ಚಿಸುತ್ತದೆ. ಇವೆಲ್ಲವನ್ನು ಮನಗಂಡು ಜನರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸಲು ಕರ್ನಾಟಕದಲ್ಲಿ ತೈಲ ಬೆಲೆಯನ್ನು ನಮ್ಮ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವು ಸುಮಾರು 2 ರೂ.ಗಳಷ್ಟು ಇಳಿಸಲು ನಿರ್ಧರಿಸಿದೆ.” ಎಂದು ಟ್ವಿಟರ್ ಖಾತೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top