ಸಮಾಚಾರ

“ಮೈತ್ರಿ ಸರ್ಕಾರ ಅಸ್ಥಿರಗೊಳ್ಳಲು ನಾನು ಕಾರಣವಲ್ಲ”- ಮಾಜಿ ಸಿಎಂ ಸಿದ್ದು

ಕಾಂಗ್ರೆಸ್ ಸಚಿವರು ಸೇರಿದಂತೆ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಜತೆಗಿನ ಸಭೆಯಲ್ಲಿ ಮಾತನಾಡಿದ್ದ ಸಿದ್ದು “ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ನಾನು ಕಾರಣವಲ್ಲ. ಆದರೆ ನಾನೇ ಕಾರಣ ಎಂದು ಬಿಂಬಿಸಲಾಗುತ್ತದೆ ಎಂದು” ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

 

 

ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ವಿವಿಧ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, “ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾಂಗ್ರೆಸ್ ಶಾಸಕರ ಸಮಸ್ಯೆಗಳು ಹಾಗೂ ಕೆಲಸಗಳಿಗೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರೆಲ್ಲರೂ ಸರ್ಕಾರ ತಮ್ಮನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ನನ್ನ ಬಳಿ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿ ಮುಂದುವರೆದರೆ ಸರ್ಕಾರ ಅಸ್ಥಿರಗೊಳ್ಳುವ ಪರಿಸ್ಥಿತಿ ನಿರ್ಮಾಣವಾದರೂ ಆಗಬಹುದು ಎಂದು ಎಚ್ಚರಿಸಿದರು ಎನ್ನಲಾಗಿದೆ.

“ಸರ್ಕಾರ ಬೀಳುವುದಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಹೇಳುತ್ತಿದ್ದಾರೆ, ನಾನು ಯಾವತ್ತೂ ಅಂಥ ಕೆಲಸ ಮಾಡುವುದಿಲ್ಲ.. ಆದರೂ ನನ್ನ ವಿರುದ್ಧ ಇಂಥ ಮಾತುಗಳು ಕೇಳಿಬರುತ್ತಿವೆ. ಇಂಥ ಮಾತು ಕೇಳಿಬರದಂತೆ ನೋಡಿಕೊಳ್ಳಬೇಕಲ್ಲವೆ” ಎಂದು ವೇಣುಗೋಪಾಲ್ ಅವರನ್ನು ಸಿದ್ದು ಪ್ರಶ್ನಿಸಿದ್ದಾರಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top