ಸಮಾಚಾರ

ವಿಧಾನ ಪರಿಷತ್ ಚುನಾವಣೆ: ಮಿಂಚೂಣಿಯಲ್ಲಿ ನಿವೇದಿತ್ ಆಳ್ವಾ ಹೆಸರು.

ರಾಜ್ಯ ವಿಧಾನ ಪರಿಷತ್​ಗೆ ನಾಮನಿರ್ದೇಶನ ಹಾಗೂ ವಿಧಾನಸಭೆಗೆ ಆಯ್ಕೆ ಮಾಡುವ ಆರು ಸ್ಥಾನಗಳ ಪೈಕಿ ನಾಲ್ವರನ್ನು ಆಯ್ಕೆ ಮಾಡುವ ಅವಕಾಶ ಕಾಂಗ್ರೆಸ್​ ಪಕ್ಷಕ್ಕೆ ಲಭಿಸಿದೆ. ನಾಲ್ಕು ಸ್ಥಾನಗಳಿಗೆ ಆಕಾಂಕ್ಷಿಗಳು ಹೆಚ್ಚಾಗಿದ್ದು, ಮೇಲ್ಮನೆ ಪ್ರವೇಶಿಸಲು ವಿಧಾನಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆಯಲ್ಲಿ ಟಿಕೆಟ್‌ ವಂಚಿತರು ತಮ್ಮ ನಾಯಕರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.

 

 

ಮೇಲ್ಮನೆಗೆ ನಿವೇದಿತ್ ಆಳ್ವಾ:
ವಿಧಾನಪರಿಷತ್‌ನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ನಿಂದ ಮಾರ್ಗರೇಟ್‌ ಆಳ್ವ ಪುತ್ರ ನಿವೇದಿತ್‌ ಆಳ್ವಾ ಅವರ ಹೆಸರು ಮಿಂಚೂಣಿಯಲ್ಲಿ ಕೇಳಿಬರುತ್ತಿದೆ. ಉಪ ಮುಖ್ಯಮಂತ್ರಿ ಪರಮೇಶ್ವರ್‌ ಈಗಾಗಲೇ ನಿವೇದಿತ್‌ ಆಳ್ವಾ ಅವರನ್ನ ಮೇಲ್ಮನೆಗೆ ಕಳುಹಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.. ಒಂದು ವೇಳೆ ಇದು ನಡೆದರೆ ವಿಧಾನಸಭೆಯಿಂದ ಆಯ್ಕೆಯಾಗುವ ಸ್ಥಾನಕ್ಕೆ ನಿವೇದಿತ್‌ ಆಳ್ವ ಪಕ್ಕಾ ಆಗಲಿದ್ದಾರೆ.,

ಉಳಿದಂತೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವರಾದ ರಾಣಿ ಸತೀಶ್‌, ಬಿ.ಕೆ. ಚಂದ್ರಶೇಖರ್‌, ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಪ್ರೊ.ಕೆ.ಇ.ರಾಧಾಕೃಷ್ಣ,ಶಫಿ ಅಹಮದ್‌, ಮಾಲೂರು ನಾರಾಯಣಸ್ವಾಮಿ, ಲಕ್ಷ್ಮೀ ನರಸಿಂಹಯ್ಯ, ಎಂ.ಸಿ. ವೇಣುಗೋಪಾಲ್‌, ಮೋಟಮ್ಮ ಪುತ್ರಿ ನಯನಾ ಮೋಟಮ್ಮ, ಡಾ. ಬಿ.ಎಸ್‌. ಶಿವಣ್ಣ ಹೆಸರೂ ಇದ್ದು ತಮ್ಮ ನಾಯಕರ ಮೂಲಕ ತೀವ್ರ ಲಾಬಿ ಮಾಡಲಾರಂಭಿಸಿದ್ದಾರೆ ಎನ್ನಲಾಗಿದೆ. ಸದ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ದೆಹಲಿ ನಾಯಕರ ‘ಕೈ’ ಸೇರಿಕೊಂಡಿದ್ದು ದಿಲ್ಲಿಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top