ಮನೋರಂಜನೆ

ಮಲ್ಟಿಪ್ಲೆಕ್ಸ್‌ನಲ್ಲಿ ‘ದಿ ವಿಲನ್‌’ ಅಡ್ವಾನ್‌ ಬುಕ್ಕಿಂಗ್‌ ಇಲ್ಲ: ಚೇಂಬರ್‌ ಮೊರೆ ಹೋದ ಪ್ರೇಮ್‌.

‘ದಿ ವಿಲನ್’ ಸದ್ಯ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲೂ ಹವಾ ಎಬ್ಬಿಸಿರೋ ಸಿನಿಮಾ., ಆರು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿರುವ ಪ್ರೇಮ್ ‘ದಿ ವಿಲನ್’ ಸಿನಿಮಾ ಮೇಲಿನ ನಿರೀಕ್ಷೆಯನ್ನು ದಿನೇ ದಿನೇ ಹೆಚ್ಚಿಸುತ್ತಲೇ ಇದ್ದಾರೆ.. ಈಗಾಗಲೇ ಬಿಡುಗಡೆಯಾಗಿರೋ ಟೀಸರ್ ಮತ್ತು ಹಾಡುಗಳ ಅಬ್ಬರ ಕಂಡು ಅನೇಕರು ಬೆಚ್ಚಿಬಿದ್ದಿದ್ದಾರೆ.. ಸೆಟ್ಟೇರಿದಾಗಿನಿಂದಲೂ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುವ ವಿಲನ್ ಅಂತೂ ಮುಂದಿನವಾರ ತೆರೆಗೆ ಅಪ್ಪಳಿಸುತ್ತಿದೆ. ಈಗಾಗಲೇ ಟಿಕೆಟ್ ಬುಕಿಂಗ್ಸ್ ಕೂಡ ಓಪನ್ ಆಗಿದ್ದು ಅದಾಗಲೇ ಎಲ್ಲೆಡೆ ಸೋಲ್ಡ್ ಬೋರ್ಡುಗಳೂ ಕಾಣಿಸುತ್ತಿವೆ..

ವಾರದ ಮೊದಲೇ ಅಡ್ವಾನ್ಸ್‌ ಬುಕ್ಕಿಂಗ್‌ಗೆ ಅವಕಾಶ ನೀಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಮಾತುಕತೆ ನಡೆದು ನಾಲ್ಕು ದಿನವಾದರೂ ಮಲ್ಟಿಪ್ಲೆಕ್ಸ್‌ ಆಡಳಿತ ಮಂಡಳಿ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ ಬುಕ್ಕಿಂಗ್‌ಗೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರೇಮ್‌ ದೂರಿದ್ದಾರೆ.

“ಮಲ್ಟಿಪ್ಲೆಕ್ಸ್ ಮನವಿ ಸಲ್ಲಿಸಿ ನಾಲ್ಕು ದಿನಗಳಾದವು.. ಬೇರೆ ರಾಜ್ಯಗಳಲ್ಲಿ ಇರುವ ನಿಯಮವನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಿರ್ಧರಿಸೋಕೆ ಇವರಿಗೆ ಎಷ್ಟು ಟೈಮ್ ಬೇಕು? ಈ ಕೆಲಸಕ್ಕಾಗಿ ಅವರು ಇರೋದು. ನಾವು ಮಲ್ಟಿಪ್ಲೆಕ್ಸ್ ಗಳಲ್ಲಿ ಗುರುವಾರದಿಂದ ಅಡ್ವಾನ್ಸ್‌ ಬುಕ್ಕಿಂಗ್‌ ಓಪನ್‌ ಮಾಡಬೇಕೆಂದಿದ್ದೆವು. ಆದರೆ, ಮಲ್ಟಿಪ್ಲೆಕ್ಸ್‌ ನಿರ್ಧಾರ ಬೇಸರತಂದಿವೆ. ಚಲನಚಿತ್ರ ವಾಣಿಜ್ಯ ಮಂಡಳಿ ಇದರ ಬಗ್ಗೆ ಕಾಳಜಿ ವಹಿಸಬೇಕು. ಮತ್ತೆ ಮಂಡಳಿಗೆ ಹೋಗಿ ಮಾತನಾಡಲಿದ್ದೇನೆ’ ಎನ್ನುತ್ತಾರೆ ಪ್ರೇಮ್‌.

ಅಂದಹಾಗೆ ಚಿತ್ರ ಬಿಡುಗಡೆಯಾಗಲು ಇನ್ನೂ ಒಂದು ವಾರ ಬಾಕಿ ಇದ್ದರೂ ಕೂಡಾ ಅಭಿಮಾನಿಗಳೆಲ್ಲ ಈಗಾಗಲೇ ತಯಾರಿ ಆರಂಭಿಸಿದ್ದಾರೆ. ಮುಖ್ಯವಾದ ಥೇಟರುಗಳು ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ‘ದಿ ವಿಲನ್’ ಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಲು ತಯಾರಿಗಳು ಭರದಿಂದ ಸಾಗುತ್ತಿವೆ. ಇದಕ್ಕಾಗಿ ಭಾರೀಗಾತ್ರದ ಕಟೌಟುಗಳೂ ಸೇರಿದಂತೆ ಡಿಫರೆಂಟಾದ ಬ್ಯಾನರುಗಳೂ ಸಿದ್ಧಗೊಳ್ಳುತ್ತಿವೆ.

ದಿ ವಿಲನ್ ಬಗ್ಗೆ ಹೇಳ್ಬೇಕಂದ್ರೆ ಚಿತ್ರದಲ್ಲಿ ಕಿಚ್ಚ ಸುದೀಪ್ ಮತ್ತು ಶಿವಣ್ಣನಿಗೆ ನಾಯಕಿಯಾಗಿ ಬ್ರಿಟಿಷ್ ಬ್ಯೂಟಿ ಆಮಿ ಜಾಕ್ಸನ್ ನಟಿಸುತ್ತಿದ್ದಾರೆ,,ಚಿತ್ರಕ್ಕೆ ಸಿ.ಮನೋಹರ್ ಬಂಡವಾಳ ಹಾಕಿದ್ದು ಅರ್ಜುನ್ಯ ಜನ್ಯರವರು ಸಂಗೀತ ಸಂಯೋಜನೆ ಮಾಡಿದ್ದಾರೆ…ಉಳಿದಂತೆ ಗಿರಿಗೌಡ ಅವರ ಕ್ಯಾಮರಾ ಕೈಚಳಕ ಚಿತ್ರಕ್ಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top