ಮನೋರಂಜನೆ

#MeToo ಅಭಿಯಾನಕ್ಕೆ ಸಾಥ್ ನೀಡಿದ ನಟಿ ಶೃತಿ ಹರಿಹರನ್- ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ದಿಷ್ಟು.

ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೊಡುವ ಆಮಿಷವೊಡ್ಡಿ ನಟಿಯರನ್ನು ಮಂಚಕ್ಕೆ ಆಹ್ವಾನಿಸುವ ಕಾಯಿಲೆ ಎಲ್ಲ ಚಿತ್ರರಂಗಗಳಿಗೂ ಸಾಂಕ್ರಾಮಿಕವಾಗಿ ಹರಡಿರೋ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಂಥ ಕಾಸ್ಟ್ ಕೌಚಿಂಗ್‌ನ ಸರಣಿ ಇದೀಗ ಎಲ್ಲೆಲ್ಲಿಯೋ ಬಿಚ್ಚಿಕೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ದೇಶವ್ಯಾಪಿ ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಇಂತಹ ಅನಿಷ್ಟ ಪಿಡುಗಿನ ವಿರುದ್ಧ ಭಾರತ ಚಿತ್ರರಂಗದ ಎಲ್ಲಾ ಭಾಷೆಯ ಪ್ರಸಿದ್ಧ ಯುವ ನಟಿಯರನೇಕರು ತಾವೇ ಅನುಭವಿಸಿದ್ದ ಕಾಸ್ಟಿಂಗ್ ಕೌಚ್ ಮನೋ ವ್ಯಾಕುಲವನ್ನು ಸಾಂದರ್ಭಿಕವಾಗಿ ಬಿಚ್ಚಿಡುತ್ತಿದ್ದಾರೆ..

ಇತ್ತೀಚಿಗೆ ಬಾಲಿವುಡ್ ನಟಿ ತನುಶ್ರೀ ದತ್ತಾ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಆರೋಪ ಮಾಡಿದೇಟಿಗೆ ಚಿತ್ರರಂಗದೊಳಗೆ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿ ಇಡೀ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಅದಾದೇಟಿಗೆ ಹಲವು ಚಿತ್ರರಂಗದ ನಟಿಯರೂ ಕೂಡ ಚಿತ್ರರಂಗದಲ್ಲಿ ತಮಗಾಗುತ್ತಿರುವ ಚಿತಾಹಿಂಸೆಯನ್ನು ಒಂದರ ಹಿಂದೊಂದರಂತೆ ಬಿಚ್ಚಿಡುತ್ತಾ ಬಂದಿದ್ದಾರೆ.. ಲೈಂಗಿಕ ಕಿರುಕುಳದ ವಿರುದ್ಧ Me Too ಅಭಿಯಾನ ಶುರುವಾಗಿದೆ. ಈ ಅಭಿಯಾನದ ಬಗ್ಗೆ ನಟಿ ಶೃತಿ ಹರಿಹರನ್ ಮಾತನಾಡಿದ್ದಾರೆ.

 

 

“ಮೀಟೂ ಅಭಿಯಾನ ಗೇಮ್ ಚೇಂಜರ್ ಆಗಿ ಬದಲಾಗಲಿದೆ,, ಮೀಟೂ ಅಭಿಯಾನದ ಬಗ್ಗೆ ಖುಷಿಯಾಗುತ್ತಿದೆ. ಈಗಲಾದರೂ ಮಹಿಳೆಯರು ಧ್ವನಿ ಎತ್ತುತ್ತಿರುವುದು ಸ್ವಾಗತಾರ್ಹವಾಗಿದೆ. ಈ ಅಭಿಯಾನದಲ್ಲಿ ದೊಡ್ಡ್ ದೊಡ್ಡ್ವರ ಹೆಸರು ಕೇಳಿಬರುತ್ತಿದೆ” ಎಂದು ಶ್ರುತಿಹರಿಹರನ್ ಹೇಳಿದ್ದಾರೆ.

” ಕಾಸ್ಟಿಂಗ್ ಕೋಚ್ ಇದು ಗಂಡು ಮತ್ತು ಹೆಣ್ಣಿನ ಪ್ರಶ್ನೆಯಲ್ಲ. ಅಧಿಕಾರ ಬಲ ಹಾಗೂ ಹಣಬಲದಿಂದ ಇಂತ ಕೃತ್ಯ ನಡೆಯುತ್ತಿವೆ. ಚಿತ್ರರಂಗದಲ್ಲಿ ಮಾತ್ರ ಇಲ್ಲ. ಎಲ್ಲ ಕ್ಷೇತ್ರಗಳಲ್ಲೂ ಕಾಸ್ಟಿಂಗ್ ಕೌಚ್ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಈ ನಿಟ್ಟಿನಲ್ಲಿ ಫೈರ್ ಅಂತ ಸಮಿತಿ ಮಾಡುತ್ತಿದೆ. ಈ ಸಮಿತಿಯಲ್ಲಿ ಕವಿತಾ ಲಂಕೇಶ್, ನಾನು ಹಾಗೂ ಪ್ರಿಯಾಂಕಾ ಉಪೇಂದ್ರ ಇದ್ದೇವೆ. ತಾರ್ಕಿಕ ಅಂತ್ಯ ದೊರೆಯುವವರೆಗೂ #MeToo ಅಭಿಯಾನ ಮುಂದುವರೆಯಲಿದೆ ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top